Sunday, November 14, 2010

Chitradurga History



ಚಿತ್ರದುರ್ಗ ಇತಿಹಾಸ
ಇತಿಹಾಸದಲ್ಲಿ ಮಹತ್ತರ ಮೌಲ್ಯವಿರುವ ಈ ಜಿಲ್ಲೆ, ಶೌರ್ಯ, ತ್ಯಾಗ, ಹಾಗೂ ಸಂಪ್ರದಾಯವನ್ನು ಮೆರೆದಿದೆ. ಇಲ್ಲಿನ ಕಲ್ಲಿನ ಕೋಟೆ ಅಥವಾ ಏಳು ಸುತ್ತಿನ ಕೋಟೆ ಇತಿಹಾಸದ ಪುಟಗಳನ್ನು ಪ್ರವಾಸಿಗರ ಮನದಲ್ಲಿ ಮರುಕಳಿಸುತ್ತದೆ.
ವಿಜಯನಗರದ ಕಾಲದಲ್ಲಿ ತಿಮ್ಮಣ್ಣ ನಾಯಕನೆಂಬ ಸೇನಾಪತಿಗೆ ತನ್ನ ಪರಾಕ್ರಮಕ್ಕೆ ಮೆಚ್ಚಿದ ವಿಜಯನಗರದ ಚಕ್ರಾಧಿಪತ್ಯದಿಂದ ಚಿತ್ರದುರ್ಗಕ್ಕೆ ರಾಜ್ಯಪಾಲನಾಗಿ ಬಳುವಳಿ ದೊರೆಯಿತಂತೆ. ಇವನ ಮಗ ಓಬಣ್ಣ ಅಥವಾ ಮದಕರಿ ನಾಯಕ. ಮದಕರಿ ನಾಯಕನ ಮಗ ಕಸ್ತೂರಿ ರಂಗಪ್ಪ ಇವನ ಆಳ್ವಿಕೆಯನ್ನು ಶಾಂತಿಯಿಂದ ಮುಂದುವರೆಸಿದನು. ಇವನಿಗೆ ಮಕ್ಕಳಿರಲಿಲ್ಲವಾದ್ದರಿಂದ ದತ್ತು ತೆಗುದುಕೊಂದನಂತೆ. ಆದರೆ ದಳವಾಯಿಗಳು ಮಗುವನ್ನು ಕೊಲ್ಲಿಸಿದರಂತೆ. ಚಿಕ್ಕಣ್ಣ ನಾಯಕ - ಮದಕರಿ ನಾಯಕನ ತಮ್ಮ ೧೬೭೬ರಲ್ಲಿ ಗದ್ದುಗೆ ಏರಿದನಂತೆ. ಇದರ ಬಳಿಕ ಬಹಳಷ್ಟು ಮಂದಿ ಗದ್ದುಗೆ ಏರಿ ಇಳಿದರಾದರೂ ಹೇಳಿಕೊಳ್ಳುವಂತಹ ರಾಜ್ಯಭಾರ ಯಾವುದೂ ಇರಲಿಲ್ಲವೆಂದು ಸಾಧಾರಣ ಅಭಿಪ್ರಾಯ.
ಇಸಿಲಇದು ಚಿತ್ರದುರ್ಗದ ಈಶಾನ್ಯ ದಿಕ್ಕಿಗಿರುವ ಬ್ರಹ್ಮಗಿರಿಗೆ ಹೊಂದಿಕೊಂಡಿದೆ. ಅಶೋಕನ ಕಾಲದಲ್ಲಿ ಪ್ರಾಂತೀಯ ರಾಜಧಾನಿಯಾಗಿತ್ತು. ಆ ಕಾಲದಲ್ಲಿ ಇಟ್ಟಿಗೆಯಲ್ಲಿ ನಿರ್ಮಿಸಿದ ಚೈತ್ಯಾಲಯವೊಂದು ಇಲ್ಲಿದೆ. ಅಶೋಕನ ಶಾಸನದಲ್ಲಿ ಇಸಿಲ ಎಂಬ ಶಬ್ಧ ದೊರಕುತ್ತದೆ.
ಸಿದ್ಧಾಪುರ ಇಲ್ಲಿ ಅಶೋಕನ ಶಾಸನ ದೊರಕಿದೆ.


ಒನಕೆ ಓಬವ್ವ
ಓಬವ್ವನ ಕಿಂಡಿ, ಚಿತ್ರದುರ್ಗದ ಕೋಟೆ.
ಒನಕೆ ಓಬವ್ವಳ ಸಾಹಸಗಾಥೆ ಕನ್ನಡ ನಾಡಿನ ಶೌರ್ಯಗಾಥೆಗಳಲ್ಲಿ ಒಂದಾಗಿ ಜನಜನಿತವಾಗಿದೆ. ಮದಕರಿ ನಾಯಕನ ಆಳ್ವಿಕೆಯ ಕಾಲದಲ್ಲಿ, ಹೈದರ-ಅಲಿಯ ಸೈನ್ಯವು ಕೋಟೆಯನ್ನು ಸುತ್ತುವರೆದಿತ್ತು. ಒಬ್ಬ ಮಹಿಳೆಯನ್ನು ಕೋಟೆಯ ಕಿಂಡಿಯಿಂದ ಒಳ ಹೊಗುವುದನ್ನು ಕಂಡ ಹೈದರ-ಅಲಿಯು ತನ್ನ ಸೈನ್ಯವನ್ನು ಆ ಕಂಡಿಯ ಮೂಲಕ ಒಳಗೆ ಕಳುಹಿಸಿ ಕೋಟೆಯನ್ನು ವಶಪಡಿಸಿಕೊಳ್ಳಲು ಸಂಚು ಹೂಡುತ್ತಾನೆ. ಕೋಟೆಯ ಆ ಭಾಗದ ಕಾವಲುಗಾರನ ಹಂಡತಿಯೇ ಓಬವ್ವ. ಅವಳು ಗಂಡನಿಗೆ ಊಟ ತರುತ್ತಾಳೆ. ಗಂಡನನ್ನು ಊಟಕ್ಕೆ ಕೂರಿಸಿ, ನೀರು ತರಲು ಹೋಗುತ್ತಾಳೆ. ಅಲ್ಲಿ ಹೈದರ-ಅಲಿಯ ಸೈನಿಕರನ್ನು ಕಿಂಡಿಯ ಮೂಲಕ ನುಸುಳುವದನ್ನು ಕಾಣುತ್ತಾಳೆ. ಎದೆಗುಂದದೆ ಕೈಯಲ್ಲಿದ್ದ ಒನಕೆಯಿಂದಲೇ ಒಳಗೆ ನುಗ್ಗುತ್ತಿರುವ ಒಬ್ಬೊಬ್ಬ ಸೈನಿಕರನ್ನು ಜಜ್ಜಿ ಕೊಲ್ಲುತ್ತಾಳೆ. ಸತ್ತವರನ್ನು ಸಂಶಯ ಬಾರದ ಹಾಗೆ ದೂರ ಎಳೆದು ಹಾಕುತ್ತಾಳೆ. ಅತ್ತ ಊಟ ಮುಗಿಸಿದ ಕಾವಲುಗಾರ ತುಂಬಾ ಹೊತ್ತಿನವರೆಗೂ ಹೆಂಡತಿಗಾಗಿ ಕಾಯ್ದ ಹುಡುಕುತ್ತ ಬರುತ್ತಾನೆ. ಅಲ್ಲಿ ರಕ್ತಸಿಕ್ತವಾದ ಒನಕೆಯನ್ನು ಕೈಯಲ್ಲಿ ಹಿಡಿದು ರಣಚಂಡಿಯ ಅವತಾರದಲ್ಲಿರುವ ಓಬವ್ವನನ್ನು ಸತ್ತು ಬಿದ್ದಿರುವ ನೂರಾರು ಹೈದರ-ಅಲಿಯ ಸೈನಿಕರನ್ನು ನೋಡಿ ಆಶ್ಚರ್ಯಚಕಿತನಾಗುತ್ತಾನೆ. ಕೂಡಲೆ ಕಹಳೆ ಊದಿ ತನ್ನ ಸೇನೆಯನ್ನು ಎಚ್ಚರಗೊಳಿಸುತ್ತಾನೆ ಹಾಗೂ ನಾಯಕನ ಸೇನೆಯು ಕೋಟೆಯನ್ನು ಹೈದರ-ಅಲಿಯ ವಶಕ್ಕೆ ಹೋಗುವದನ್ನು ತಪ್ಪಿಸುತ್ತದೆ. ಓಬವ್ವನ ಸಮಯೋಚಿತ ಯುಕ್ತಿ ಮತ್ತು ಧೈರ್ಯವನ್ನು ಈಗಲೂ ಜನ ನೆನೆಯುತ್ತಾರೆ. ಈ ಘಟನೆಗೆ ಸಾಕ್ಷಿಯಾಗಿ ಈಗಲೂ ಆ ಕಿಂಡಿಯನ್ನು ಏಳು ಸುತ್ತಿನ ಕೋಟೆಯಲ್ಲಿ ಕಾಣಬಹುದು. ಅದು ಚಿತ್ರದುರ್ಗದ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ .ಮತ್ತು ಚಿತ್ರದುಗದಲ್ಲಿ [www.chitharadurga.com]
ಚಿತ್ರದುರ್ಗದ ಪ್ರಮುಖ ಪ್ರವಾಸಿ ಸ್ಥಳಗಳು
ಏಳು ಸುತ್ತಿನ ಕೋಟೆ
ಚ೦ದ್ರವಳ್ಳಿ ತೊಟ
ಮುರುಘಾ ಮಠ
ಉಪ್ಪಾರಹಟ್ಟಿ
ಜಿಲ್ಲೆಯೆ ತಾಲ್ಲೂಕುಗಳು
ಚಿತ್ರದುರ್ಗ
ಹಿರಿಯೂರು
ಚಳ್ಳಕೆರೆ
ಮೊಳಕಾಲ್ಮೂರು
ಹೊಸದುರ್ಗ
ಹೊಳಲ್ಕೆರೆ



ಪ್ರಮುಖ ವ್ಯಕ್ತಿಗಳು
ಡಾ.ಶಿವಮೂರ್ತಿ ಸ್ವಾಮಿಜಿ.ಸಿರಿಗೆರೆ
ಎಸ್. ನಿಜಲಿಂಗಪ್ಪ
ಶಿವಮೂರ್ತಿ ಶರಣರು
ಪ್ರೊ. ಬಿ ರಾಜಶೇಖರಪ್ಪ
ಬಿ.ಎಲ್.ವೇಣು
ಜಿ.ದುರ್ಗಪ್ಪ
ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮಿಗಳು (ತಿರುಕ)
ತ.ರಾ.ಸು
ಪಿ.ಆರ್.ತಿಪ್ಪೇಸ್ವಾಮಿ
ಬೆಳಗೆರೆ ಕೃಷ್ಣಶಾಸ್ತ್ರಿ
ಬೆಳಗೆರೆ ಜಾನಕಮ್ಮ
ಸಿರಿಯಜ್ಜಿ
ಡಾ.ಬಂಜಗೆರೆ ಜಯಪ್ರಕಾಶ್
ಟಿ ಎಸ್ ವೆಂಕಣ್ಣಯ್ಯ
ಡೊಟಾ ರಾಮ
ಡಾ.ಎಚ್.ಆರ್.ಚಂದ್ರಶೇಖರ್

2 comments:

  1. Hi.. Nataraj

    I saw ur blog.. Its nice.
    Thankful to show interst on chitradurga history.
    Plz visit www.chitharadurga.com
    give link from ur blog also.

    ReplyDelete

Chitradurga History

ಚಿತ್ರದುರ್ಗ ಇತಿಹಾಸ ಇತಿಹಾಸ ದಲ್ಲಿ ಮಹತ್ತರ ಮೌಲ್ಯವಿರುವ ಈ ಜಿಲ್ಲೆ, ಶೌರ್ಯ, ತ್ಯಾಗ, ಹಾಗೂ ಸಂಪ್ರದಾಯವನ್ನು ಮೆರೆದಿದೆ. ಇಲ್ಲಿನ ಕಲ್ಲಿನ ಕೋಟೆ ಅಥವಾ ಏಳು ಸುತ್ತಿನ ಕ...